ಕಲಬುರಗಿ: ಪೇಜಾವರ ಶ್ರೀಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿ ವಿಶೇಷ ಪೂಜೆ - special worship in kalaburagi temple for pejawar shree cure
ಕಲಬುರಗಿ: ಉಡುಪಿಯ ಪೇಜಾವರ ಮಠದ ಶ್ರೀಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿ ಇಲ್ಲಿನ ಶರಣಬಸವೇಶ್ವರ ದೇವಸ್ಥಾನದಲ್ಲಿ ವೀರಶೈವ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಎಮ್.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀಗಳು ಶೀಘ್ರ ಚೇತರಿಸಿಕೊಂಡು ಮಠದ ಸೇವೆಗೆ ಮರಳಿದರೆ, ಉಡುಪಿ ಮಠಕ್ಕೆ ತೆರಳಿ 101 ತೆಂಗಿನಕಾಯಿ ಒಡೆಯುವುದಾಗಿ ಹರಕೆ ಕಟ್ಟಿಕೊಂಡರು.