ಕೊನೆಯ ಶ್ರಾವಣ ಸೋಮವಾರ.., ಸಾಯಿಬಾಬಾಗೆ ವಿಶೇಷ ಪೂಜೆ - Last monday of shravan
ಕಲಬುರಗಿಯಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಗುಬ್ಬಿ ಕಾಲೋನಿಯಲ್ಲಿರುವ ಸಾಯಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. 12 ವರ್ಷದ ವಾರ್ಷಿಕೋತ್ಸವದ ಹಿನ್ನೆಲೆ ರುದ್ರಾಭಿಷೇಕ, ಕ್ಷೀರಾಭಿಷೇಕ ಸೇರಿದಂತೆ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. ಸಾಯಿಬಾಬಾ ಮೂರ್ತಿಯನ್ನು ಸುಂದರವಾಗಿ ಅಲಂಕರಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ಪ್ರಸಾದ ಸೇವಿಸಿ ಪುನೀತರಾದರು.