ಎಸ್.ಪಿ.ಬಾಲಸುಬ್ರಮಣ್ಯಂ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ - SP Balasubramaniam unhealthy
ರಾಯಚೂರು: ಹಿರಿಯ ಗಾಯಕ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆಯಾಗಲಿ ಎಂದು ರಾಯಚೂರು ಜಿಲ್ಲಾ ಕಲಾವಿದರ ಸಂಘದ ವತಿಯಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ನಗರ ದೇವತೆ ಮಾತೆ ಕಂದಗಡ್ಡೆ ಮಾರೆಮ್ಮ ದೇವಿ ದೇವಸ್ಥಾನದಲ್ಲಿ, ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಬೇಗ ಆರೋಗ್ಯವಂತರಾಗಿ ಮತ್ತೆ ನಾಡಿನ ಅಭಿಮಾನಿಗಳ ಮುಂದೆ ಹಾಡುವ ಕೋಗಿಲೆಯಾಗಿ ಬರಲಿ ಎಂದು ಬೇಡಿಕೊಂಡು ವಿಶೇಷ ಪೂಜೆ ಸಲ್ಲಿಸಲಾಯಿತು.