ಮುಂದಿನ ತಿಂಗಳು ಮಾದಿಗ ಸಮುದಾಯಕ್ಕೆ ಮೀಸಲಾತಿಗಾಗಿ ಪಾದಯಾತ್ರೆ - ಶ್ರೀ ಆದಿಜಾಂಬವ ಬೃಹನ್ಮಠ ಕೋಡಿಹಳ್ಳಿ
🎬 Watch Now: Feature Video
ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿಗಾಗಿ ಬರುವ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುವುದು ಎಂದು ಶ್ರೀ ಆದಿಜಾಂಬವ ಬೃಹನ್ಮಠ ಕೋಡಿಹಳ್ಳಿ ಶ್ರೀ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಮಾದಿಗ ಸಮುದಾಯ ಶೈಕ್ಷಣಿಕ, ಆರ್ಥಿಕ, ಸಮಾಜಿಕವಾಗಿ ಹಿಂದುಳಿದಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಪಕ್ಷಗಳು ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಹಾಗೂ ಸದಾಶಿವ ಆಯೋಗದ ವರದಿ ಜಾರಿ ಮಾಡುತ್ತೇವೆ ಎಂದು ಹೇಳಿಕೊಂಡು ಬಂದಿದ್ದಾರೆ. ಆದರೆ ಇದುವರಿಗೂ ಕಾರ್ಯ ರೂಪಕ್ಕೆ ತರಲು ವಿಫಲವಾಗಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಪಾದಯಾತ್ರೆಯಲ್ಲಿ ವಿವಿಧ ಮಠಾಧೀಶರು, ಸಮುದಾಯದ ಮುಖಂಡರು ಭಾಗಿಯಾಗಲಿದ್ದಾರೆ. ಈ ಕುರಿತು ಸಭೆ ನಡೆಸಿ ಬಳಿಕ ದಿನಾಂಕ ಹಾಗೂ ಎಲ್ಲಿಂದ ಪಾದಯಾತ್ರೆ ನಡೆಸಲಾಗುತ್ತದೆ ಎಂದು ತಿಳಿಸಲಾಗುವುದು ಎಂದರು.