ಡಿಕೆಶಿ ಬಂಧನ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಶಾಸಕ ರಾಜೇಗೌಡ ಭಾಗಿ - ಡಿಕೆಶಿ ಬಂಧನ
ಚಿಕ್ಕಮಗಳೂರು: ಇಡಿ ಇಲಾಖೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಇಂದು ರಾಜಧಾನಿಯಲ್ಲಿ ಡಿಕೆಶಿ ಅವರ ಬಿಡುಗಡೆಗೆ ಒತ್ತಾಯಿಸಿ ಸಾವಿರಾರು ಜನರು ಪ್ರತಿಭಟನೆ ಕೈಗೊಂಡಿದ್ದಾರೆ. ಇದಕ್ಕೆ ಡಿಕೆಶಿ ಆಪ್ತ ಹಾಗೂ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇವರ ನೇತೃತ್ವದಲ್ಲಿ ಸುಮಾರು 500ಕ್ಕೂ ಹೆಚ್ಚು ಬೆಂಬಲಿಗರು ಬೆಂಗಳೂರಿಗೆ ಪ್ರಯಾಣ ಬೆಳಸಿದ್ದು, ಡಿಕೆಶಿ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.