ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ: ಚಿತ್ರದುರ್ಗದಲ್ಲಿ ಸಕಲ ಸಿದ್ಧತೆ - ಎಸ್ಎಸ್ಎಲ್ಸಿ ಪರೀಕ್ಷೆ
ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 97 ಪರೀಕ್ಷಾ ಕೇಂದ್ರಗಳು ಇದ್ದು, 22,615 ವಿದ್ಯಾರ್ಥಿಗಳು ನಾಳೆ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಇನ್ನು ಜಿಲ್ಲೆಯ ಗಡಿಭಾಗದ ಹೊರ ರಾಜ್ಯದಿಂದ 349 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಅವರಿಗೆ ಪರೀಕ್ಷೆ ಬರೆಯಲು ಹಾಸ್ಟೆಲ್ ವ್ಯವಸ್ಥೆ ಮಾಡಲಾಗಿದೆ.