ಹಾಸನದಲ್ಲಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ - ಎಸ್ಎಸ್ಎಲ್ಸಿ ಪರೀಕ್ಷೆ
ಹಾಸನ: ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಜಿಲ್ಲೆಯಲ್ಲಿನ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ಸ್ಕ್ರೀನಿಂಗ್, ಸ್ಯಾನಿಟೈಸ್ ಮಾಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಕರು ಮೈಕ್ ಮೂಲಕ ಪೂರಕ ಮಾಹಿತಿ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ಪರೀಕ್ಷಾ ಕೇಂದ್ರಗಳ ಸುತ್ತ ನಿಯೋಜಿಸಲಾಗಿದೆ.