ಉಡುಪಿ: ಕೋವಿಡ್ ನಿಯಮಗಳೊಂದಿಗೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿ ಪ್ರವೇಶ - ಎಸ್ಎಸ್ಎಲ್ಸಿ ಪರೀಕ್ಷೆ
SSLC ಪರೀಕ್ಷೆ ಹಿನ್ನೆಲೆಯಲ್ಲಿ ಉಡುಪಿ ಒಳಕಾಡು ಶಾಲೆಯಲ್ಲಿ ಪೂರಕ ಸಿದ್ಧತೆ ನಡೆಸಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳ ಜೊತೆ ಪೋಷಕರು ಆಗಮಿಸಿದ್ದರು. ಈ ವೇಳೆ ಎಲ್ಲರನ್ನೂ ತಪಾಸಣೆ ಮಾಡಲಾಯ್ತು. ಕೈಗಳಿಗೆ ಸ್ಯಾನಿಟೈಸರ್ ಹಾಕಿ, ಮಾಸ್ಕ್ ಹಾಕಿರುವುದನ್ನು ಪರಿಶೀಲಿಸುವ ಮೂಲಕ ಕೋವಿಡ್ ನಿಯಮಗಳನ್ನು ಪಾಲಿಸಿ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳನ್ನು ಬಿಡಲಾಯ್ತು. 2 ಗಂಟೆಗಳಷ್ಟು ಮೊದಲೇ ಪರೀಕ್ಷಾರ್ಥಿಗಳು ಕೇಂದ್ರಕ್ಕೆ ಆಗಮಿಸಿದ್ದರು.