ಗಣಿತ ಪರೀಕ್ಷೆ ಬರೆಯಲು ಉತ್ಸಾಹದಿಂದ ಆಗಮಿಸಿದ ಕೋಟೆನಾಡಿನ ವಿದ್ಯಾರ್ಥಿಗಳು - latest chitradurga news
ಎಸ್ಎಸ್ಎಲ್ಸಿ ಪರೀಕ್ಷೆಯ ಎರಡನೇ ದಿನವಾದ ಇಂದು ಮಹಾಮಾರಿ ಕೊರೊನಾ ಭಯದ ನಡುವೆ ಕೋಟೆನಾಡಿನ ವಿದ್ಯಾರ್ಥಿಗಳು ಉತ್ಸಾಹದಿಂದ ಗಣಿತ ಪರೀಕ್ಷೆ ಬರೆಯಲು ಆಗಮಿಸಿದರು. ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಎರಡು ಸಾಲಿನಲ್ಲಿ ನಿಲ್ಲಿಸುವ ಮೂಲಕ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಪರೀಕ್ಷಾ ಕೇಂದ್ರದೊಳಗೆ ಕಳುಹಿಸಿದರು. ಉತ್ಸಾಹದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಸಿಬ್ಬಂದಿ ಸುರಕ್ಷತಾ ಕ್ರಮಗಳ ಬಗ್ಗೆ ಗಮನ ಕೊಟ್ಟು ಬರಮಾಡಿಕೊಂಡ್ರು.