ಎಸ್ಎಸ್ಎಲ್ಸಿ ಪರೀಕ್ಷೆ ಸಂಬಂಧ 23 ಕ್ಕೆ ಸರ್ಕಾರದ ನಿಲುವು ಪ್ರಕಟ: ಸಚಿವ ಎಸ್.ಸುರೇಶ್ ಕುಮಾರ್ - ಎಸ್ಎಸ್ಎಲ್ಸಿ ಪರೀಕ್ಷೆ
ಎಸ್ಎಸ್ಎಲ್ಸಿ ಪರೀಕ್ಷೆಯ ಕುರಿತಾಗಿ ವಿದ್ಯಾರ್ಥಿಗಳ ಹಿತ ಕಾಪಾಡುವ ನಿಟ್ಟಿನಿಂದ ಇದೇ 23ಕ್ಕೆ ಶಿಕ್ಷಣ ಇಲಾಖೆ ನಿಲುವು ಪ್ರಕಟಿಸಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಯವರ ಜೊತೆ ಸಮಾಲೋಚಿಸಿ ಶಿಕ್ಷಣ ಇಲಾಖೆಯಿಂದ ಸ್ಪಷ್ಟ ನಿಲುವು ಪ್ರಕಟಿಸುತ್ತೇವೆ ಎಂದು ತಿಳಿಸಿದರು.