ಕೋವಿಡ್-19 ಆಸ್ಪತ್ರೆ ಪಕ್ಕದಲ್ಲೇ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ - ಎಸ್ಸೆಸ್ಸೆಲ್ಸಿ ಪರೀಕ್ಷೆ 2020
ಕೊಪ್ಪಳ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಲಿದ್ದು, ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಎಲ್ಲ ತಯಾರಿ ಮಾಡಲಾಗಿದೆ. ಜಿಲ್ಲೆಯಲ್ಲಿ 80 ಪರೀಕ್ಷಾ ಕೇಂದ್ರಗಳಲ್ಲಿ 22,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊಪ್ಪಳದ ಎಸ್ಎಫ್ಎಲ್ ಶಾಲೆಯನ್ನು ಪರೀಕ್ಷಾ ಕೇಂದ್ರ ಮಾಡಿರುವುದು ಟೀಕೆಗೆ ಕಾರಣವಾಗಿದೆ. ಈ ಪರೀಕ್ಷಾ ಕೇಂದ್ರದ ಪಕ್ಕದಲ್ಲಿಯೇ ಕೋವಿಡ್-19 ಆಸ್ಪತ್ರೆ ಇದೆ. ಹೀಗಾಗಿ, ಪಾಲಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಅಲ್ಲಿನ ಸಿದ್ಧತೆ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.