ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರತಿಭಟನೆ.. - ಮಂಗಳೂರು ಸಂತ ಅಲೋಶಿಯಸ್ ವಿದ್ಯಾರ್ಥಿಗಳ ಪ್ರತಿಭಟನೆ ಸುದ್ದಿ
ಮಂಗಳೂರು: ಇತ್ತೀಚಿಗೆ ದೇಶದಲ್ಲಿ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯರ ಮೇಲಾಗುತ್ತಿರುವ ಅತ್ಯಾಚಾರವನ್ನು ವಿರೋಧಿಸಿ ನಗರದ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದರು. ಇಂದು ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿದ್ಯಾರ್ಥಿಗಳು ಸೇರಿ ಬೀದಿ ನಾಟಕ, ನೃತ್ಯ, ಹಾಡುಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ಅಲ್ಲದೆ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಲ್ಲಿ ಎಚ್ಚರಿಕೆ ಮೂಡಿಸಿದರು. ವಿದ್ಯಾರ್ಥಿಗಳ ಈ ಜಾಗೃತಿ ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಸಾಥ್ ನೀಡಿದ್ದರು.