ದಾವಣಗೆರೆಯಲ್ಲಿ ಹಿಂದೂ ಮಹಾಗಣಪತಿ ನಿಮಜ್ಜನಕ್ಕೆ ಅದ್ದೂರಿ ಚಾಲನೆ - Hindu Maha Ganapathi,
ದಾವಣಗೆರೆ ಹಿಂದೂ ಮಹಾಗಣಪತಿ ನಿಮಜ್ಜನ ಮೆರವಣಿಗೆಗೆ ಶಾಸಕ ಎಸ್.ಎ ರವೀಂದ್ರನಾಥ್ ಚಾಲನೆ ನೀಡಿದರು. ನಗರದ ಹೈಸ್ಕೂಲ್ ಮೈದಾನದಿಂದ ಹೊರಟ ಮೆರವಣಿಗೆ ಎವಿಕೆ ರಸ್ತೆ ಮೂಲಕ ಅಂಬೇಡ್ಕರ್ ವೃತ್ತ, ಜಯದೇವ ವೃತ್ತದ ಕಡೆಗೆ ಹೊರಟಿದೆ. ಲಕ್ಷಕ್ಕೂ ಅಧಿಕ ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಂಡಿದ್ದು, ಮಹಿಳೆಯರಿಗೆ ಪ್ರತ್ಯೇಕ ಡಿಜೆ ವ್ಯವಸ್ಥೆ ಮಾಡಲಾಗಿದೆ.