ಮಾರ್ಚ್ನಲ್ಲಿ ಆರೋಗ್ಯ ಇಲಾಖೆ ನೌಕರರ ರಾಜ್ಯಮಟ್ಟದ ಸಮ್ಮೇಳನ - Haveri news
ಹಾವೇರಿ: ಮಾರ್ಚ್ನಲ್ಲಿ ಆರೋಗ್ಯ ಇಲಾಖೆ ನೌಕರರ ರಾಜ್ಯಮಟ್ಟದ ಸಮ್ಮೇಳನ ನಡೆಸುವುದಾಗಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎ.ಪುಟ್ಟಸ್ವಾಮಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಪ್ರಮುಖವಾಗಿ 4 ಬೇಡಿಕೆಗಳನ್ನ ಸಲ್ಲಿಸಿದ್ದೇವೆ. ಸರ್ಕಾರದಿಂದ 4 ಬೇಡಿಕೆ ಈಡೇರಿಸುವ ಭರವಸೆ ಸಿಕ್ಕಿದೆ ಎಂದರು. ಸರ್ಕಾರ ಈ ಕುರಿತಂತೆ ಸಕಾರತ್ಮಕವಾಗಿ ಸ್ಪಂದಿಸಿದೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅರೇವೈದ್ಯಕೀಯ ನೌಕರರಿಗೆ ಕೊರೊನಾ ಭತ್ಯೆ ನೀಡಬೇಕು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ವಿಲೀನಗೊಳಿಸಬೇಕು. ವೃಂದ ಮತ್ತು ನೇಮಕಾತಿ ವೇಳೆ ಅನುಸರಿಸುವ ಮಾನದಂಡಗಳನ್ನ ಮಾರ್ಪಡಿಸುವಂತೆ ಪುಟ್ಟಸ್ವಾಮಿ ಆಗ್ರಹಿಸಿದ್ದಾರೆ.