ಧಾರವಾಡದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಲಾಕ್‌ಡೌನ್: ಪ್ರತ್ಯಕ್ಷ ವರದಿ - ಲಾಕ್ ಡೌನ್
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಇಂದಿನಿಂದ ಜೂನ್ 7ರವರೆಗೆ ಕಟ್ಟುನಿಟ್ಟಿನ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ಬೆಳಗ್ಗೆ 6 ರಿಂದ 8 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಧಾರವಾಡದ ಸೂಪರ್ ಮಾರುಕಟ್ಟೆಗೂ ಲಾಕ್‌ಡೌನ್ ಬಿಸಿ ತಟ್ಟಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.