ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ - ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಪಶುವೈದ್ಯೆ ಮೇಲೆ ನಡೆದ ಅತ್ಯಾಚಾರ ಕೊಲೆ ಆರೋಪಿಗಳುಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಬಳ್ಳಾರಿ ನಗರದ ರಾಯಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದರು. ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಸರ್ಕಾರದ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ವರದಿಯಲ್ಲಿ ತಿಳಿಸಿದ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.