ಕಾಮುಕರ ಎನ್ಕೌಂಟರ್ಗೆ ವಿದ್ಯಾರ್ಥಿಗಳ ಸಂಭ್ರಮ... ವಿಶ್ವನಾಥ್ ಸಜ್ಜನರ್ಗೆ ಜೈಕಾರ - ಗಂಗಾವತಿಯ ಸೇಂಟ್ ಪಾಲ್ಸ್ ಕಾಲೇಜಿನಲ್ಲಿ ಸಂಭ್ರಮ
ಕೊಪ್ಪಳ: ಹೈದರಾಬಾದ್ನಲ್ಲಿ ಪಶು ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಕ್ಕೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿಯೂ ಜನರು ಸಂಭ್ರಮಿಸಿದ್ದಾರೆ. ಜಿಲ್ಲೆಯ ಗಂಗಾವತಿ ನಗರದಲ್ಲಿರುವ ಸೇಂಟ್ ಪಾಲ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಪರಸ್ಪರ ಬಣ್ಣ ಎರಚಿ ಸಿಹಿ ಹಂಚಿ ಸಂಭ್ರಮಿಸಿದರು. ಕನ್ನಡಿಗ, ಸೈಬರಾಬಾದ್ ಪೊಲೀಸ್ ಕಮೀಷನರ್ ವಿಶ್ವನಾಥ್ ಸಜ್ಜನರ್ ಅವರಿಗೆ ಜೈಕಾರ ಹಾಕಿ, ಜೈ..ಹೋ ಹಾಡಿಗೆ ಡ್ಯಾನ್ಸ್ ಮಾಡಿ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.