ರಾಷ್ಟ್ರ ರಾಜಧಾನಿಯಲ್ಲಿ ಅಮಾಯಕರ ಮೇಲೆ ಪೊಲೀಸರ ಹಲ್ಲೆ... ರಾಜಭವನದ ಮುಂದೆ ವಿದ್ಯಾರ್ಥಿ ಮೋರ್ಚಾ ಪ್ರತಿಭಟನೆ! - ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ, ಅಮಾಯಕರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ರಾಜಭವನದ ಮುಂದೆ ವಿದ್ಯಾರ್ಥಿ ಮೋರ್ಚಾ ಪ್ರತಿಭಟನೆ ನಡೆಸಿತು. ಈ ವೇಳೆ, ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನ ಬಂಧನ ಮಾಡಿದರು.