ಸೂಕ್ತ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು : ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಾರಿಗೆ ವ್ಯವಸ್ಥೆ ಸುಧಾರಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ರು. ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಬರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ್ರು. ಕಾಲೇಜುಗಳು ಆರಂಭವಾಗಿದ್ದು, ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಇಲ್ಲದ ಕಾರಣ ತೊಂದರೆ ಅನುಭವಿಸುವಂತಾಗಿದೆ. ಅಷ್ಟೇ ಅಲ್ಲ, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸೂಕ್ತ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ರು.