ಬಸ್ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು: ಪ್ರಯಾಣಿಕರ ಪರದಾಟ - ಗದಗ ವಿದ್ಯಾರ್ಥಿಗಳ ಪ್ರತಿಭಟನೆ ನ್ಯೂಸ್
ಗದಗ: ಸಮರ್ಪಕವಾಗಿ ಬಸ್ ಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬಸ್ ನಿಲ್ದಾಣದ ಎದುರು ಕಲ್ಲು ಹಾಕಿ, ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ನಗರಗದಲ್ಲಿ ನಡೆದಿದೆ. ಇಲ್ಲಿನ ಹೊಸ ಬಸ್ ನಿಲ್ದಾಣದ ಎದುರು ನೂರಾರು ವಿದ್ಯಾರ್ಥಿಗಳು ಜಮಾಯಿಸಿ ಸಮರ್ಪಕವಾಗಿ ಬಸ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು. ಹಲವಾರು ದಿನಗಳಿಂದ ಗದಗದಿಂದ ಬೆಳದಡಿ, ನಾಗಾವಿ, ಶಿರಹಟ್ಟಿ, ಬೆಳ್ಳಟ್ಟಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಬಸ್ ಸೌಲಭ್ಯ ಸರಿಯಾಗಿಲ್ಲ. ಹೀಗಾಗಿ ಪ್ರತಿದಿನ ಸಂಜೆ 4 ಗಂಟೆಯಿಂದ ಬಸ್ಗಾಗಿ ವಿದ್ಯಾರ್ಥಿಗಳು ಪರದಾಡುತ್ತಿದ್ದರು. ಹಲವಾರು ಬಾರಿ ಮನವಿ ಮಾಡಿಕೊಂಡರೂ ಸಹ ಯಾವುದೇ ಅಧಿಕಾರಿಗಳು ಗಮನ ಹರಿಸುತ್ತಿರಲಿಲ್ಲ. ಹಾಗಾಗಿ ಇಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಹಿನ್ನೆಲೆ ದೂರದ ಪ್ರದೇಶಗಳಿಗೆ ಹೋಗುವ ಪ್ರಯಾಣಿಕರು ಕೆಲ ಕಾಲ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.