ಕರ್ನಾಟಕ

karnataka

ETV Bharat / videos

ಕಲಬುರಗಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪ್ರತಿಭಟನೆ - demanding for bus facility

By

Published : Feb 3, 2021, 12:56 PM IST

ಕಲಬುರಗಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಎಐಡಿಎಸ್​​ಒ ಸಂಘಟನೆಯ ನೇತೃತ್ವದಲ್ಲಿ ನಗರದ ಸಾರಿಗೆ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಲಾಕ್​ಡೌನ್ ತೆರವುಗೊಳಿಸಿ ಹಲವು ದಿನಗಳು ಕಳೆದಿವೆ. ಶಾಲಾ - ಕಾಲೇಜುಗಳನ್ನು ಸಹ ಆರಂಭಸಲಾಗಿದೆ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಸ್ ವ್ಯವಸ್ಥೆ ಇಲ್ಲದ ಕಾರಣ ಕಾಲೇಜಿಗೆ ಬರಲು ಹರಸಾಹಸ ಪಡಬೇಕಾಗಿದೆ. ಜಿಲ್ಲೆಯ ಸೇಡಂ, ಚಿತ್ತಾಪುರ, ಜೇವರ್ಗಿ ಹೀಗೆ ಬೇರೆ ಬೇರೆ ಕಡೆಗಳಿಂದ ವಿದ್ಯಾರ್ಥಿಗಳು ಕಲಬುರಗಿ ನಗರಕ್ಕೆ ಓದಲು ಬರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅತಿ ಹೆಚ್ಚು ಬಸ್ ಮೇಲೆ ಅವಲಂಬಿತರಾಗಿದ್ದು, ಕೊರೊನಾ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ಗ್ರಾಮೀಣ ಭಾಗದ ಬಸ್ ಸಂಚಾರವನ್ನು ಪುನರಾರಂಭಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ABOUT THE AUTHOR

...view details