ಮೇಯರ್ ಸ್ಥಾನ ಕೈ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಸುನಂದಾ ಪಾಲನೇತ್ರ - Mysore Mayor
ಮೈಸೂರು: ಮಹಾನಗರ ಪಾಲಿಕೆಯಲ್ಲಿ ಮೇಯರ್ ಸ್ಥಾನ ಕೈ ತಪ್ಪಿದ್ದಕ್ಕೆ ಆಕಾಂಕ್ಷಿಯಾಗಿದ್ದ ನಗರ ಪಾಲಿಕೆ ಬಿಜೆಪಿ ಸದಸ್ಯೆ ಸುನಂದ ಪಾಲನೇತ್ರ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಬುಧವಾರ ನಡೆದ ಮೇಯರ್ - ಉಪಮೇಯರ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುನಂದ ಪಾಲನೇತ್ರ ನಾಮಪತ್ರ ಸಲ್ಲಿಸಿದ್ದರು. ಜೆಡಿಎಸ್ ಹಾಗೂ ಕಾಂಗ್ರೆಸ್ ಒಳ ಒಪ್ಪಂದದಿಂದ ಮೇಯರ್ ಸ್ಥಾನ ಸುನಂದ ಅವರ ಕೈ ತಪ್ಪಿದ್ದು, ಇದರಿಂದ ತೀವ್ರ ಮನನೊಂದು ನಗರ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.