ರಾಯಚೂರಿನಲ್ಲಿ ಹೇಗಿದೆ ಸಂಡೇ ಲಾಕ್‌ಡೌನ್ ಪರಿಣಾಮ? - ರಾಯಚೂರು ಸಂಡೇ ಲಾಕ್ ಡೌನ್ ಸುದ್ದಿ
ಕೊರೊನಾ ಸೋಂಕು ನಿಯಂತ್ರಿಸಲು ಸರ್ಕಾರ ಭಾನುವಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ಇದಕ್ಕೆ ರಾಯಚೂರು ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಗತ್ಯ ಹಾಗು ತುರ್ತುಸೇವೆಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ಸೇವೆಗಳ ಪೂರೈಕೆ ಸ್ಥಗಿತವಾಗಿದೆ. ಕಳೆದ ರಾತ್ರಿಯಿಂದ ಜಿಲ್ಲೆಯಾದ್ಯಂತ ಅಂಗಡಿಗಳನ್ನು ಮುಚ್ಚಲಾಗಿದೆ. ತರಕಾರಿ, ಹಾಲು ವ್ಯಾಪಾರಕ್ಕೆ ಬೆಳಗ್ಗೆ ಅವಕಾಶ ಕಲ್ಪಿಸಲಾಗಿದ್ದು, ಅನಗತ್ಯವಾಗಿ ಓಡಾಟಕ್ಕೆ ಅವಕಾಶವಿಲ್ಲ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ಮಾಹಿತಿ ನೀಡಿದ್ದಾರೆ.
Last Updated : Jul 5, 2020, 10:58 AM IST