ಮನೆ ಮುಂದೆ ರಂಗೋಲಿ ಬಿಡಿಸಿ ಜನತಾ ಕರ್ಫ್ಯೂಗೆ ಬೆಂಬಲ - belagavi news
ಅಥಣಿ: ಮಾಹಾಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ದೇಶವ್ಯಾಪಿ ಕರೆ ನೀಡಿರುವ ಜನತಾ ಕರ್ಪ್ಯೂಗೆ ಅಥಣಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ದಿನನಿತ್ಯ ಜನಜಂಗುಳಿಯಿಂದ ಕೂಡಿರುತ್ತಿದ್ದ ದೇವಸ್ಥಾನ, ಮಾರುಕಟ್ಟೆ,ಅಂಗಡಿ-ಮುಂಗಟ್ಟುಗಳು ಸಂಪೂರ್ಣ ಬಂದಾಗಿದ್ದು,ಸಂಚಾರ ಇಲ್ಲದೆ ರಸ್ತೆಗಳು ಖಾಲಿ ಹೊಡೆಯುತ್ತಿವೆ. ಕರ್ನಾಟಕ,ಮಹಾರಾಷ್ಟ್ರ ಮತ್ತು ಗೋವಾ ಗಡಿಭಾಗದಲ್ಲಿ ವಾಹನ ಸಂಚಾರ ಮತ್ತು ಸಾರಿಗೆ ವ್ಯವಸ್ಥೆ ನಿಲ್ಲಿಸಿದ್ದರಿಂದ ಜನಜೀವನ ಸ್ತಬ್ಧವಾಗಿದೆ. ವಿಶೇಷವಾಗಿ ಮಹಿಳೆಯರು ಮನೆ ಮುಂದೆ ರಂಗೋಲಿ ಬಿಡಿಸಿ ಜನತಾ ಕರ್ಫ್ಯೂ ತಮ್ಮದೇ ಆದ ಬೆಂಬಲ ಸೂಚಿಸಿದ್ದಾರೆ.