ಕರ್ನಾಟಕ

karnataka

ETV Bharat / videos

ನಾಳಿನ ಜನತಾ ಕರ್ಫ್ಯೂಗೆ ಬಾರ್ ಅಸೋಸಿಯೇಶನ್​ನಿಂದ ಬೆಂಬಲ - ಜನತಾ ಕರ್ಫ್ಯೂ ಸುದ್ದಿ

By

Published : Mar 21, 2020, 1:58 PM IST

ಪ್ರಧಾನಿ ನರೇಂದ್ರ ಮೋದಿ ಇದೇ 22 ರಂದು ಕರೆ ನೀಡಿರುವ ಜನತಾ ಕರ್ಫ್ಯೂಗೆ ಹಾವೇರಿ ಜಿಲ್ಲಾ ಬಾರ್ ಅಸೋಸಿಯೇಶನ್ ಬೆಂಬಲ ವ್ಯಕ್ತಪಡಿಸಿದೆ. ಈ ಕುರಿತಂತೆ ಆಸೋಸಿಯೇಶನ್ ಅಧ್ಯಕ್ಷ ಬಸವರಾಜ್ ಬೆಳವಡಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಸುಮಾರು 160 ಜನ ಸನ್ನದುದಾರರಿದ್ದು, ರವಿವಾರ ಎಲ್ಲ ಬಾರ್‌ಗಳನ್ನು ಬಂದ್ ಮಾಡುವ ಮೂಲಕ ಪ್ರಧಾನಿ ಕರೆಗೆ ಬೆಂಬಲ ನೀಡುವುದಾಗಿ ತಿಳಿಸಿದರು. ಅಲ್ಲದೆ ಬಾರ್‌ನಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ರಜೆ ನೀಡಲಾಗಿದ್ದು, ಮನೆಯಲ್ಲಿ ಇರುವಂತೆ ಸೂಚಿಸಲಾಗಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕಂಬಂಧಬಾಹು ಚಾಚುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಹಲವು ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರು ಕರೆ ನೀಡಿರುವ ಜನತಾ ಕರ್ಫ್ಯೂಗೆ ಬೆಂಬಲಿಸುವುದಾಗಿ ಅಸೋಸಿಯೇಶನ್ ಅಧ್ಯಕ್ಷ ಬಸವರಾಜ್ ತಿಳಿಸಿದ್ದಾರೆ.

ABOUT THE AUTHOR

...view details