ಚಿಕ್ಕಮಗಳೂರಿನಲ್ಲಿ ಜನತಾ ಕರ್ಫ್ಯೂಗೆ ಬೆಂಬಲ: ಕಾರ್ಯನಿರತರಿಗೆ ಚಪ್ಪಾಳೆ ಮೂಲಕ ಗೌರವ ಸಮರ್ಪಣೆ - Claps
ಚಿಕ್ಕಮಗಳೂರು: ಮಹಾಮಾರಿ ಕೊರೊನೊ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಬೆಳಗ್ಗೆಯಿಂದಲೇ ಮನೆಯಲ್ಲಿ ಜನರು ಉಳಿದುಕೊಳ್ಳುವ ಮೂಲಕ ಜನತಾ ಕರ್ಫ್ಯೂಗೆ ಬೆಂಬಲ ಸೂಚಿಸಿದ್ದರು. ಸಂಜೆ ಐದು ಗಂಟೆಯ ನಂತರ ಮನೆಯಿಂದ ಜನರು ಹೊರ ಬಂದು, ಕೊರೊನೊ ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವ ವೈದ್ಯರು, ಯೋಧರು, ಪೊಲೀಸರು, ಪತ್ರಕರ್ತರ ಶ್ರಮಕ್ಕೆ ಒಳ್ಳೆಯದಾಗಲಿ ಎಂದು ಚಪ್ಪಾಳೆ ತಟ್ಟುವುದರ ಮೂಲಕ ಗೌರವ ಸಮರ್ಪಣೆ ಸಲ್ಲಿಸಿದರು.