ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳದಂತೆ ಯು.ಬಿ. ಬಣಕಾರಗೆ ಬೆಂಬಲಿಗರ ಒತ್ತಾಯ - ಹಾವೇರಿ ಜಿಲ್ಲೆ ಹಿರೇಕೆರೂರ ಕ್ಷೇತ್ರ
ಹಾವೇರಿ: ಬಿಜೆಪಿ ಸರ್ಕಾರ ನೀಡಿರುವ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳದಂತೆ ಬಿಜೆಪಿ ಮಾಜಿ ಶಾಸಕ ಯು.ಬಿ.ಬಣಕಾರ ನಿವಾಸದ ಮುಂದೆ ಅವರ ಬೆಂಬಲಿಗರು ಧರಣಿ ನಡೆಸಿದ್ದಾರೆ. ಶಾಸಕರ ಅನರ್ಹತೆ ಹಿನ್ನೆಲೆ ಹಿರೇಕೆರೂರು ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಅನರ್ಹ ಶಾಸಕ ಬಿ.ಸಿ.ಪಾಟೀಲಗೆ ಬಿಜೆಪಿ ಟಿಕೆಟ್ ನೀಡುವ ಸಲುವಾಗಿ, ಮಾಜಿ ಶಾಸಕ ಬಣಕಾರಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದೆ. ಆದರೆ ಯಾವುದೇ ಕಾರಣಕ್ಕೂ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಸ್ವೀಕರಿಸದಂತೆ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಾಯಿಸಿ ಬೆಂಬಲಿಗರು ಧರಣಿ ನಡೆಸಿದ್ದಾರೆ.