ಶಿರಾ ಉಪಚುನಾವಣೆ ಬಿಜೆಪಿ ಗೆಲುವು ಶತಸಿದ್ಧ...; ಸುರೇಶ್ ಗೌಡ - ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ
ತುಮಕೂರು ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಕೂಡ ಸರ್ವ ಸಿದ್ಧತೆ ಮಾಡಿಕೊಂಡಿದೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಬಿಜೆಪಿ ಪಕ್ಷವು ಹಿಂದುತ್ವದ ಆಧಾರದ ಮೇಲೆಯೇ ಇರುವಂತಹದ್ದು. ಶಿರಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆಗಳಿಗೆ ಬಿಜೆಪಿ ಸರ್ಕಾರ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿದೆ. ಹೀಗಾಗಿ ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂಬ ಅಭಿಪ್ರಾಯವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ ತಿಳಿಸಿದ್ದಾರೆ.