ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ - Nelamangala news
ನೆಲಮಂಗಲ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಕೆಂಪರಾಜು (45) ಎಂದು ಗುರುತಿಸಲಾಗಿದೆ. ಈತ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆಯ ನಿವಾಸಿ. ಬೆತ್ತನಗೆರೆ ಗ್ರಾಮದ ಖಾಸಗಿ ಲೇಔಟ್ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಜಮೀನು ವಿವಾದದ ಹಿನ್ನೆಲೆ ಕೊಲೆಯಾಗಿರುವ ಶಂಕೆ ಇದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.