ಪ್ರಣಬ್ ಮುಖರ್ಜಿ ನಿಧನಕ್ಕೆ ಸುತ್ತೂರು ಶ್ರೀಗಳಿಂದ ಸಂತಾಪ - condolence of death of Pranab Mukherjee
ಮೈಸೂರು: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ವಿಧಿವಶರಾದುದು ವಿಷಾದದ ಸಂಗತಿ. ಪಶ್ಚಿಮ ಬಂಗಾಳದಲ್ಲಿ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. 1969ರಿಂದ ನಾಲ್ಕು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಲ್ಲಿ ಕೈಗಾರಿಕಾಭಿವೃದ್ಧಿ, ಹಣಕಾಸು, ವಿದೇಶಾಂಗ ಮುಂತಾದ ಪ್ರಮುಖ ಖಾತೆಗಳ ಸಚಿವರಾಗಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಿದರು. 2004ರಲ್ಲಿ ಲೋಕಸಭೆಗೆ ಆಯ್ಕೆಯಾಗಿ ಸಭಾ ನಾಯಕರಾಗಿ ನಿಯುಕ್ತಿಗೊಂಡಿದ್ದರು. ಉತ್ತಮ ವಾಗ್ಮಿಗಳು ಮತ್ತು ಲೇಖಕರಾಗಿದ್ದರು ಎಂದು ಶ್ರೀಗಳು ಗುಣಗಾನ ಮಾಡಿದ್ದಾರೆ.