ಬೈಕ್ಗೆ ಟ್ಯಾಂಕರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - ಬೈಕ್ಗೆ ಟ್ಯಾಂಕರ್ ಡಿಕ್ಕಿ
ಬೆಳಗಾವಿ: ಬೈಕ್ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಗ್ಲೋಬ್ ಚಿತ್ರಮಂದಿರ ಬಳಿ ಸಂಭವಿಸಿದೆ. ಜಾಧವ್ ನಗರ ನಿವಾಸಿ ಕಿರಣ್‌ಸಿಂಗ್ ರಜಪೂತ್(48) ಮೃತ ದುರ್ದೈವಿ. ಟ್ಯಾಂಕರ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಬೆಳಗಾವಿ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.