ಮಿನಿಸ್ಟರ್ ನೇತೃತ್ವದಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ - ಪಶು ಸಂಗೋಪನಾ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಪ್ರಭು ಚವ್ಹಾಣ
ಬೀದರ್ ಜಿಲ್ಲೆಯ ಔರಾದ್ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಶಿಕ್ಷಕರ ಸಂಘದಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಶು ಸಂಗೋಪನೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಪ್ರಭು ಚವ್ಹಾಣ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಮೊಮ್ಮಗ ಸುಬ್ರಹ್ಮಣ್ಯ ಸ್ವಾಮಿ, ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಬಸವಲಿಂಗ ಪಟ್ಟದೇವರು ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಉಪಸ್ಥಿತರಿದ್ದರು.
Last Updated : Sep 30, 2019, 5:23 PM IST