ಬೆಳಗಾವಿಯಲ್ಲಿ ದೇವಸ್ಥಾನಕ್ಕೆ ನುಗ್ಗಿದ ನೀರು: ಹಲವು ರಸ್ತೆಗಳು ಜಲಾವೃತ - Temples submerged in water
ಬೆಳಗಾವಿಯ ಗಡಿ ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ದೇವಾಲಯ, ರಸ್ತೆಗಳು ಜಲಾವೃತವಾಗಿವೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದ ದುರ್ಗಾ ದೇವಿ ದೇವಸ್ಥಾನದ ಸುತ್ತ ನೀರು ನಿಂತಿದೆ. ಚಿಕ್ಕೋಡಿ ಉಪ ವಿಭಾಗದ ಪ್ರಮುಖ 15ಕ್ಕೂ ಹೆಚ್ಚು ದೇವಸ್ಥಾನಗಳು ಮುಳುಗಡೆಯಾಗಿವೆ. ಬಿಡುವು ನೀಡದ ಮಳೆರಾಯನಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಡುಗಡ್ಡೆ ಗ್ರಾಮಗಳಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗುತ್ತಿದ್ದು, ಗಂಜಿ ಕೇಂದ್ರಗಳನ್ನು ತೆರೆಯಲು ತಹಶೀಲ್ದಾರ್ ಸೂಚಿಸಿದ್ದಾರೆ.