ಮೈತ್ರಿ ಪಕ್ಷಕ್ಕೆ 20 ಸ್ಥಾನ ಸಿಗುವುದು ಗ್ಯಾರಂಟಿ: ಐವಾನ್ ಡಿಸೋಜ
ಈ ಬಾರಿ ರಾಜ್ಯದಲ್ಲಿ ಮೈತ್ರಿ ಪಕ್ಷ 20ಕ್ಕೂ ಅಧಿಕ ಸ್ಥಾನಗಳನ್ನು ಗಳಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಮೈಸೂರಿನ ಕಾಂಗ್ರೆಸ್ ಭವನದ ಬಳಿ 'ಈಟಿವಿ ಭಾರತ'ದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮೋದಿ ಅಲೆ ಇಲ್ಲ. ಅವರು ಕಳೆದ ಬಾರಿ ಸುಳ್ಳು ಹೇಳಿ ಗೆಲುವು ಸಾಧಿಸಿದ್ದಾರೆ. ಆದರೆ ಈ ಬಾರಿ ಅದು ನಡೆಯುವುದಿಲ್ಲ ಎಂದಿದ್ದಾರೆ. ಅಲ್ಲದೆ ಇದೇ ವೇಳೆ ಮಾಜಿ ಐಪಿಎಸ್ ಅಧಿಕಾರಿ ಸಾಂಗ್ಲಿಯಾನ ಕಾಂಗ್ರೆಸ್ ಪಕ್ಷ ತೊರೆದಿದ್ದು ಏಕೆ ಅನ್ನೋದನ್ನು ಸಹ ಬಹಿರಂಗಪಡಿಸಿದ್ದಾರೆ.