ಆಲಮಟ್ಟಿಗೆ ಸಿಎಂ ಭೇಟಿ: ಕೃಷ್ಣೆಗೆ ಬಾಗಿನ ಅರ್ಪಿಸಿದ ಬಿಎಸ್ವೈ - ಜಲಾಶಯಕ್ಕೆ ಪೂಜೆ
ಆಲಮಟ್ಟಿಯ ಕೃಷ್ಣಾ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾಗಿನ ಅರ್ಪಿಸಿದ್ದಾರೆ. ಶುಕ್ರವಾರ ಸಂಜೆ ಆಲಮಟ್ಟಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದ ಸಿಎಂ ಬೆಳಗ್ಗೆ ಅಧಿಕಾರಿಗಳ ಜೊತೆ ಪ್ರವಾಹ ಸಂತ್ರಸ್ತರ ಪರಿಹಾರ ಕುರಿತು ಸಭೆ ನಡೆಸಿದರು. ನಂತರ ಜಲಾಶಯಕ್ಕೆ ಪೂಜೆ ಸಲ್ಲಿಸಿ ಕೃಷ್ಣೆಗೆ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು. ಈ ವೇಳೆ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.