ಸಚಿವ ಈಶ್ವರಪ್ಪ ಕಾರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು.. - Shimoga District Congress
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕೋರ್ಟ್ ಸರ್ಕಲ್ ಬಳಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ಬಂದ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಾಗೂ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ನಂತರ ಬೆಂಗಾವಲು ಪಡೆ ಪ್ರತಿಭಟನಾಕಾರರನ್ನು ಸರಿಸಿ ಕಾರು ಮುಂದೆ ಹೋಗಲು ಅನುವು ಮಾಡಿಕೊಟ್ಟರು.