ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ - Mangalore rain
ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು, ಅರಬ್ಬಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಏಳಲಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಜು. 10 ರಂದು ಬೆಳಗ್ಗೆ 8.30ರಿಂದ 24 ಗಂಟೆಗಳ ಕಾಲ 115 ಮಿ.ಮೀ.ವರೆಗೆ ಮಳೆಯಾಗಲಿದೆ. ಜು. 11ರಿಂದ 14ರವರೆಗೆ 65 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.