ಸಂಕಷ್ಟದಲ್ಲಿ ನೆರೆ ಸಂತ್ರಸ್ತರು... ಪರಿಹಾರ ನೀಡದಿದ್ದರೆ ಆತ್ಮಹತ್ಯೆ ಎಚ್ಚರಿಕೆ - ಗದಗದಲ್ಲಿ ಮೂಲಭೂತ ಸೌಲಭ್ಯದ ಕೊರತೆ
ಗದಗ: ಪ್ರವಾಹ ಬಂದು ಸೂರು ಕಳೆದುಕೊಂಡಿದ್ರೂ ಸರ್ಕಾರ ಮಾತ್ರ ಸಂತ್ರಸ್ತರ ಸಮಸ್ಯೆಯನ್ನೇ ಕೇಳುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇತ್ತ ಸಮಾಧಾನಕ್ಕಾದರೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ. ಸಿ ಪಾಟೀಲ್ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಜಿಲ್ಲೆಯ ರೋಣ ತಾಲೂಕಿನ ಹೊಳೆಮಣ್ಣೂರು ಗ್ರಾಮದಲ್ಲಿನ ಸಂತ್ರಸ್ತರ ಗೋಳು ಹೇಳತೀರದಾಗಿದ್ದು, ಮನೆಯ ಹಕ್ಕುಪತ್ರ, ಮೂಲಭೂತ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ. ಸಮಸ್ಯೆ ಬಗೆಹರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.