ರಾಜ್ಯದಲ್ಲಿ ಮುಂದಿನ ಐದು ದಿನ ಒಣ ಹವೆ: ಸಿ.ಎಸ್. ಪಾಟೀಲ್ ಮುನ್ಸೂಚನೆ - CS Patil talks about climate in bengalore
ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಮಾನ ಮುನ್ಸೂಚನೆ ವಿಭಾಗದ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಬೀದರ್ ನಲ್ಲಿ ಕನಿಷ್ಠ ಉಷ್ಣಾಂಶ 8.2 ಡಿಗ್ರಿ ಸೆಂಟಿಗ್ರೇಡ್, ಹಾಸನ 11, ವಿಜಯಪುರ 12.5, ಧಾರವಾಡ 13.5, ದಾವಣಗೆರೆಯಲ್ಲಿ 14 ಡಿಗ್ರಿ ಸೆಂಟಿಗ್ರೇಡ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಕನಿಷ್ಠ ಹಾಗೂ ಗರಿಷ್ಠ ಉಷ್ಣಾಂಶ ಕ್ರಮವಾಗಿ 17 ಹಾಗೂ 28 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಮುಂಜಾನೆ ವೇಳೆ ಹೆಚ್ಚು ಮಂಜು ಬೀಳುವ ಸಾಧ್ಯತೆ ಇದೆ ಎಂದರು.