ವಿಪ್ ಉಲ್ಲಂಘಿಸಿದವರ ಮೇಲೆ ಪಕ್ಷ ಕ್ರಮ ಕೈಗೊಳ್ಳುತ್ತದೆ: ಸಂಸದ ಸಂಗಣ್ಣ ಕರಡಿ
ಕೊಪ್ಪಳ: ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿತ್ತು. ವಿಪ್ ಉಲ್ಲಂಘಿಸಿದವರ ಮೇಲೆ ಪಕ್ಷ ಕ್ರಮ ಕೈಗೊಳ್ಳುತ್ತದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ. ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಚುನಾವಣೆ ಬಳಿಕ ಮಾತನಾಡಿದ ಅವರು, ನಮ್ಮ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ 9 ಮತಗಳು ಬಂದಿವೆ. ಕಾಂಗ್ರೆಸ್ ಅಭ್ಯರ್ಥಿಗಳಿಗೆ 11 ಮತಗಳು ಬಂದು ಗೆಲುವು ಸಾಧಿಸಿದ್ದಾರೆ ಎಂದರು.