ದಂಡ ವಸೂಲಿ: ಸಂಚಾರಿ ಪೊಲೀಸರ ವಿರುದ್ಧ ಜನಾಕ್ರೋಶ
ಉಡುಪಿ: ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯಿದೆ ದಂಡ ವಸೂಲಿ ವಿರುದ್ಧ ನಾಗಕರು ಎಲ್ಲೆಡೆ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಜಿಲ್ಲೆಯಲ್ಲೂ ಈ ತರಹದ ಘಟನೆ ನಡೆದಿದೆ. ಸಾರ್ವಜನಿಕರು ಈ ಕುರಿತ ವಿಡಿಯೋ ಮಾಡಿ ಹರಿಬಿಟ್ಟಿದ್ದು, ಈಗ ವೈರಲ್ ಆಗುತ್ತಿದೆ. ನಗರದ ಪಿಪಿಸಿ ಕಾಲೇಜು ಸಮೀಪ ಈ ಪ್ರಸಂಗ ನಡೆದಿದ್ದು, ನಗರದ ಪಿಪಿಸಿ ಕಾಲೇಜು ಬಳಿ ಸಮವಸ್ತ್ರ ಧರಿಸದ, ಮಫ್ತಿಯಲ್ಲಿರುವ ಪೊಲೀಸನೊಬ್ಬ ಸಂಜೆ ವೇಳೆ ದ್ವಿಚಕ್ರ ವಾಹನಗಳನ್ನು ತಡೆದು ದಂಡ ವಸೂಲಿಗೆ ಇಳಿದಿದ್ದರು. ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ಇಲ್ಲದ ಈ ಪೊಲೀಸನ ವರ್ತನೆ ಸಂಶಯ ಮೂಡಿಸುವಂತಿತ್ತು. ಕ್ರಮೇಣ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಮತ್ತು ವಿದ್ಯಾರ್ಥಿಗಳು, ಸಂಚಾರಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಅಲ್ಲೆ ಸ್ವಲ್ಪ ದೂರದಲ್ಲಿ ಇಲಾಖಾ ಜೀಪಿನಲ್ಲಿದ್ದ ಟ್ರಾಫಿಕ್ ಎಸ್ಐ ಅವರನ್ನು ತಡೆದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆಯಿತು.