ಕೋಟೆ ನಾಡಲ್ಲಿ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ - Chitradurga
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಡೆದಿದ್ದು, ಭಕ್ತರಲ್ಲಿ ಸಂಭ್ರಮ ಮನೆ ಮಾಡಿತ್ತು. ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡಿದ್ದ ಶೋಭಾಯಾತ್ರೆಯಲ್ಲಿ ಸಾವಿರ ಕೃಷ್ಣನ ಭಕ್ತರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಹಿರಿಯೂರಿನ ವೇದಾವತಿ ನಗರದಲ್ಲಿರುವ ಶ್ರೀಕೃಷ್ಣ ದೇವಾಲಯದಿಂದ ಆರಂಭವಾದ ಶೋಭಯಾತ್ರೆ ಪ್ರಮುಖ ರಾಜ ಬೀದಿಗಳಲ್ಲಿ ಸಾಗಿ ಸಂಭ್ರಮಾಚರಣೆಗೆ ಕಾರಣವಾಯಿತು. ಕಾರ್ಯಕ್ರಮಕ್ಕೆ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಸಾಥ್ ನೀಡಿದ್ದು ವಿಶೇಷವಾಗಿತ್ತು.