ಜ್ಯುವೆಲ್ಲರಿ ಶಾಪ್ಗೆ ಕನ್ನ: ಖದೀಮನ ಕೃತ್ಯ ಸಿಸಿಟಿವಿಯಲ್ಲಿ ಸೆರೆ - ಕಳ್ಳತನ
ದೊಡ್ಡಬಳ್ಳಾಪುರ: ಜ್ಯುವೆಲ್ಲರಿ ಶಾಪ್ಗೆ ಕನ್ನ ಹಾಕಿದ್ದ ಕಳ್ಳರು ಸುಮಾರು 650 ಗ್ರಾಂ ಚಿನ್ನ, 7 ಕೆಜಿ ಬೆಳ್ಳಿ ದೋಚಿರುವ ಘಟನೆ ತಾಲೂಕಿನಲ್ಲಿ ಇತ್ತೀಚೆಗೆ ನಡೆದಿತ್ತು. ಇಲ್ಲಿನ ತೂಬಗೆರೆಯ ಖಾನರಾಮ್ ಎಂಬುವರಿಗೆ ಸೇರಿದ ಜ್ಯುವೆಲ್ಲರಿ ಶಾಪ್ನಲ್ಲಿ ಜೂನ್ 30 ರಂದು ತಡರಾತ್ರಿ ಶಾಪ್ನ ಹಿಂಬದಿಯ ಗೋಡೆ ಕೊರೆದು ಚಿನ್ನಾಭರಣ ಕದ್ದೊಯ್ದಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.