ದೇಗುಲದ ಹುಂಡಿ ಹೊತ್ತೊಯ್ದ ಖದೀಮರು: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ - ಶಂಭುಲಿಂಗೇಶ್ವರ ದೇಗುಲ
ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಸಾಸಲು ಗ್ರಾಮದ ಶಂಭುಲಿಂಗೇಶ್ವರ ದೇಗುಲದಲ್ಲಿ ಖದೀಮರು ಹುಂಡಿ ಕದ್ದೊಯ್ದಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಜ.10ರ ಮಧ್ಯರಾತ್ರಿ ನಾಲ್ಕೈದು ಜನ ಯುವಕರ ತಂಡ ದೇಗುಲದ ಬಾಗಿಲು ಮುರಿದು ಹುಂಡಿ ಹೊತ್ತೊಯ್ದಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jan 12, 2021, 4:51 PM IST