ಇದು ಸಬ್ ಕಾ ಸಾಥ್ ಬಜೆಟ್ ಅಲ್ಲ, ಸಬ್ ಕಾ ಸರ್ವನಾಶ್ ಬಜೆಟ್: ಕೆಪಿಸಿಸಿ ವಕ್ತಾರ - ಬಜೆಟ್ 2020
ಮೈಸೂರು: ಇದು ಸಬ್ ಕಾ ಸಾಥ್ ಬಜೆಟ್ ಅಲ್ಲ, ಸಬ್ ಕಾ ಸರ್ವನಾಶ್ ಬಜೆಟ್ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿರುವ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವ್ಯಂಗ್ಯವಾಡಿದರು. ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರಾವಾಡಕ್ಕೆ ಸೀಮಿತವಾದ ಬಜೆಟ್ ಇದಾಗಿದೆ. ಹಳೇ ಮೈಸೂರು ಭಾಗಕ್ಕೆ ಯಾವ ಕೊಡುಗೆ ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದರು.