ಚಿಕ್ಕಮಗಳೂನಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು - three people Corona Positive
ಚಿಕ್ಕಮಗಳೂನಲ್ಲಿ ಶನಿವಾರ ಮತ್ತೆ ಮೂರು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಿಂದ ಇಬ್ಬರು ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 82 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದ್ದರೆ, ಕಡೂರು ತಾಲೂಕಿನಲ್ಲಿ ಓರ್ವರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 47 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯ ಕೊರೊನಾ ಮಾಹಿತಿ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.