ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲಿ ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು - ಚಿಕ್ಕಬಳ್ಳಾಪುರದಲ್ಲಿ ಲಾಕ್ಡೌನ್ ಉಲ್ಲಂಘನೆ
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಜನ್ರು ಲಾಕ್ಡೌನ್ಗೆ ಕ್ಯಾರೇ ಎನ್ನುತ್ತಿಲ್ಲ. ಜಿಲ್ಲೆಯ ಎಪಿಎಂಸಿ ಯಾರ್ಡ್‌ನ ಹೂವಿನ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಹೂ ಖರೀದಿಸಲು ಜನರು ಮುಗಿಬೀಳುತ್ತಿದ್ದಾರೆ. ಈಗಾಗಲೇ ಕೊರೊನಾ ಬಾಧಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂಥ ಸಂದರ್ಭದಲ್ಲಿ ಜನ ಸರ್ಕಾರದ ಆದೇಶ ಅಲಕ್ಷಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.