ಹುಬ್ಬಳ್ಳಿಯಲ್ಲಿ ಸಿಡಿಲಿನ ಅಬ್ಬರಕ್ಕೆ ಹೊತ್ತಿ ಉರಿದ ಕಲ್ಪವೃಕ್ಷ - hubli latest news
ಹುಬ್ಬಳ್ಳಿ: ನಿನ್ನೆ ಕೂಡ ಹುಬ್ಬಳ್ಳಿಯಲ್ಲಿ ಗುಡುಗು ಸಿಡಿಲಿನ ಸಹಿತ ಮಳೆ ಅಬ್ಬರಿಸಿದೆ. ನಗರದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ವಿದ್ಯಾ ನಗರದಲ್ಲಿನ ಮನೆಯೊಂದರ ಎದುರಿಗಿದ್ದ ಈ ತೆಂಗಿನ ಮರಕ್ಕೆ ಸಿಡಿಲು ಅಪ್ಪಳಿಸಿ, ಈ ಘಟನೆ ಸಂಭವಿಸಿದೆ. ಮರಕ್ಕೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸಮಯಪ್ರಜ್ಞೆ ತೋರಿದ ಸ್ಥಳೀಯರು ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.