ಕಾಂಗ್ರೆಸ್ನಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆಗೆ ಕೂಡಿ ಬರುತ್ತಿಲ್ಲವಾ ಮುಹೂರ್ತ? - Farmer CM Siddaramaiah
ಹೊಸ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಪ್ರತಿಪಕ್ಷದ ನಾಯಕರನ್ನು ಆಯ್ಕೆ ಮಾಡಲು ಕಾಲ ಕೂಡಿ ಬಂದಿಲ್ಲ. ಪಕ್ಷದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಈಗಲೂ ನಾಲ್ಕೈದು ಆಕಾಂಕ್ಷಿಗಳು ಕಾಯುತ್ತಲೇ ಇದ್ದಾರೆ. ಸದ್ಯ ಪ್ರತಿಪಕ್ಷ ನಾಯಕ ಸ್ಥಾನ ನಿಭಾಯಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳು ಕೇಳಿಬರುತ್ತಿವೆ.