ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ... ಪ್ರಾಣಾಪಾಯದಿಂದ ಪಾರಾದ ಬೈಕ್ ಸವಾರ - ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ, ಎರಡು ಬೈಕ್, ಬಸ್ ನಿಲ್ದಾಣ, ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕಾರವಾರ ತಾಲೂಕಿನ ಸದಾಶಿವಗಡದ ಮಹಮ್ಮಾಯ ದೇವಸ್ಥಾನದ ಬಳಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ರಾಜೇಖಾನಭಾಗದ ಸಂದೀಪ ಕಾಂಬಳೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.